+5 प्रतिक्रिया 1 कॉमेंट्स • 0 शेयर

+19 प्रतिक्रिया 0 कॉमेंट्स • 23 शेयर

+16 प्रतिक्रिया 0 कॉमेंट्स • 23 शेयर

+10 प्रतिक्रिया 0 कॉमेंट्स • 4 शेयर

+17 प्रतिक्रिया 2 कॉमेंट्स • 11 शेयर

+6 प्रतिक्रिया 0 कॉमेंट्स • 5 शेयर

. *🌸ಬ್ರಾಹ್ಮೀ ಮುಹೂರ್ತ ವಿಚಾರ ಧಾರೆ🌸* ರಾತ್ರಿಯ ಅಂತಿಮ ಪ್ರಹರವೇ *ಬ್ರಾಹ್ಮೀ ಮುಹೂರ್ತ* 🌻ಆಯುರ್ವೇದದ ಪ್ರಕಾರ ಮುಂಜಾನೆಯ ನಸುಕಿನ 3:00 ರಿಂದ 6:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ. 🌻ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ. 🌻ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ. 🌻ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡಾ ೪೧ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ. 🌻ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸುತ್ತದೆ. 🌻ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ. 🌻ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ. 🌻ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ. 🌻ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ. 🌻ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ. 🌻ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಕನ್ನಡಿ, ಬಿಲ್ವಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ. 🌻ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ. 🌻ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಶಾಂತ ಹಾಗೂ ಸ್ಥಿರವಾಗಿರುತ್ತದೆ. ವಾತಾವರಣದಲ್ಲಿ ಶುದ್ಧತೆಯೂ ಹೆಚ್ಚಿರುತ್ತದೆ. ಆಗ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ. 🌻ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. *ಲೋಕಾಃ ಸಮಸ್ತಾಃ ಸುಖಿನೋ ಭವಂತು* (ಕಳುಹಿಸಿದ *ಹಿರಿಯರಿಗೆ* ವಂದಿಸಿ, ನಿಮಗೆ ನೀಡುತ್ತಿದ್ದೇನೆ.)

+3 प्रतिक्रिया 1 कॉमेंट्स • 16 शेयर